ರೆಬಲ್ ಸ್ಟಾರ್ ಅಂಬರೀಷ್ ಕಣದಿಂದ ಹಿಂದೆ ಸರಿಯಲು ಕಾರಣವೇನು ಗೊತ್ತಾ?!

Webdunia
ಬುಧವಾರ, 25 ಏಪ್ರಿಲ್ 2018 (07:03 IST)
ಮಂಡ್ಯ: ಮಂಡ್ಯದ ಗಂಡು ಎಂದರೆ ಒಂದೇ ಒಂದು ಹೆಸರು ಬರುವುದು ರೆಬಲ್  ಸ್ಟಾರ್ ಅಂಬರೀಷ್. ಅಷ್ಟರಮಟ್ಟಿಗೆ ಅಲ್ಲಿಯ ಜನರ ಪ್ರೀತಿ ಗಳಿಸಿಕೊಂಡಿದ್ದ ಅಂಬರೀಷ್ ಈ ಬಾರಿ ವಿಧಾನಸಭೆಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಿಲ್ಲವೆಂದು ಬಿಟ್ಟರು!

ಮನೆಗೇ ಬಿ ಫಾರಂ ಕಳುಹಿಸಿಕೊಟ್ಟರೂ ಅಂಬರೀಷ್ ಸ್ಪರ್ಧೆಯಿಂದ ಹಿಂದೆ ಸರಿಯಲು ಹಲವು ಕಾರಣಗಳಿವೆ ಎನ್ನಲಾಗಿದೆ. ಮೊದಲನೆಯದಾಗಿ ಮಂಡ್ಯ ಜಿಲ್ಲೆಯಲ್ಲೇ ಅಂಬರೀಷ್ ರನ್ನು ಮೂಲೆಗುಂಪು ಮಾಡುತ್ತಿರುವುದು.

ಅವರನ್ನು ಕೇಳದೆಯೇ ಜಿಲ್ಲಾ ಕಾಂಗ್ರೆಸ್ ನ ನಿರ್ಧಾರಗಳು ನಡೆಯುತ್ತಿರುವುದರಿಂದ ಅಂಬಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅದಲ್ಲದೆ, ಪಕ್ಷದ ಕೆಲವು ಪ್ರಮುಖ ನಾಯಕರೇ ಅಂಬರೀಷ್ ರನ್ನು ಅವಗಣಿಸುತ್ತಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ದೋಸ್ತಿಯಂತಿದ್ದ ಸಿಎಂ ಸಿದ್ದರಾಮಯ್ಯ ಕೂಡಾ ಅಂಬರೀಷ್ ಅಸಮಾಧಾನಕ್ಕೆ ಮುಲಾಮು ಹಚ್ಚುವ ಕೆಲಸ ಮಾಡಲಿಲ್ಲ. ಅತ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಂಬರೀಷ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಾತನಾಡಿದ್ದರು. ಇದೆಲ್ಲಾ ಅಂಬಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿತು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments