Publish Date: Tue, 05 Sep 2017 (20:03 IST)
Updated Date: Tue, 05 Sep 2017 (20:04 IST)
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಹಲವು ಸಚಿವರ ವಿರುದ್ಧ ಸಿಬಿಐ ತನಿಖೆ ನಡೆದಿದೆ. ಕೇಂದ್ರ ಸಚಿವರು ರಾಜೀನಾಮೆ ಕೊಟ್ಟಿದ್ದಾರಾ? ಅವರು ರಾಜೀನಾಮೆ ಕೊಡದಿದ್ದ ಮೇಲೆ ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
ಸಚಿವ ಜಾರ್ಜ್ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಿಂದೆ ಸಿಐಡಿ ತನಿಖೆಯ ವೇಳೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ವಿಪಕ್ಷಗಳ ಆರೋಪಗಳಿಂದ ರಾಜೀನಾಮೆ ನೀಡಿದ್ದರು. ಸಿಐಡಿ ಕ್ಲೀನ್‌ಚಿಟ್ ನೀಡಿದ ನಂತರ ಮತ್ತೆ ಸಚಿವರಾಗಿ ಮುಂದುವರಿದಿದ್ದಾರೆ ಎಂದರು.
ರಾಜ್ಯದ ಸಚಿವರಾಗಿ ಜಾರ್ಜ್ ಸಿಬಿಐ ಅಧಿಕಾರಿಗಳ ಮೇಲೆ ಯಾವ ರೀತಿ ಪ್ರಭಾವ ಬೀರಲು ಸಾಧ್ಯ ಎಂದು ಪ್ರಶ್ನಿಸಿದ ಅವರು ವಿಪಕ್ಷಗಳ ಒತ್ತಾಯಕ್ಕೆ ಸರಕಾರ ಮಣಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.