Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾದ್ರು ಯಾಕೆ?

ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾದ್ರು ಯಾಕೆ?
ಬೆಳಗಾವಿ , ಮಂಗಳವಾರ, 26 ಅಕ್ಟೋಬರ್ 2021 (13:18 IST)
ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕುರಿಗಾಹಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ.
ಈ ವಿಚಾರವಾಗಿಯು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.  'ಅನುಗ್ರಹ' ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ ? ಕುರಿಗಾಹಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ನಾಟಕ ನಿಲ್ಲಿಸಿ, ನಿಮಗೆ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ 'ಅನುಗ್ರಹ' ಯೋಜನೆಗೆ ಹಣ ಒದಗಿಸಿ ಪಶುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಅಂತ ಟ್ವಿಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮತಬೇಟೆ ಶುರುವಾಯ್ತ?