ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಎದುರೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಸುಜಿತ (25) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ ಎಂದು ತಿಳಿದು ಬಂದಿದೆ. ಪತ್ನಿ ಆತ್ಮಹತ್ಯೆಗೆ ಶರಣಾಗುತ್ತಿರುವದನ್ನು ಕಂಡ ಪತಿ, ಪತ್ನಿಯ ಆತ್ಮಹತ್ಯೆ ಪ್ರಯತ್ನವನ್ನು ಪ್ರಯತ್ನಿಸಿದ್ದಾನೆ. ಆದರೆ, ಆತನ ಪ್ರಯತ್ನ ವಿಫಲವಾಯಿತು ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ವಿನೋದ್‌ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿನೋದ್-ಸುಜಿತ ದಂಪತಿ ಆಂದ್ರಪ್ರದೇಶ ಮೂಲದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ