ಫೋನ್ನಲ್ಲೇ ಮುಳುಗಿರುತ್ತಿದ್ದ ಪತ್ನಿ, ಶಂಕಿಸಿ ಕೊಲೆ ಮಾಡಿದ ಪತಿ!

Webdunia
ಶುಕ್ರವಾರ, 22 ಏಪ್ರಿಲ್ 2022 (10:33 IST)
ಬೆಂಗಳೂರು : ಸದಾ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಶೀಲ ಶಂಕಿಸಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕ್ಯಾಬ್ ಚಾಲಕನೊಬ್ಬ ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಕಾವೇರಿಪುರದ 13ನೇ ಅಡ್ಡರಸ್ತೆ ನಿವಾಸಿ ವನಜಾಕ್ಷಿ(31) ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಮೃತಳ ಪತಿ ಅಶೋಕ್ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್ ಮಾತುಕತೆ ವಿಚಾರವಾಗಿ ಭಾನುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಕೆರಳಿದ ಅಶೋಕ್, ಪತ್ನಿ ಕತ್ತು ಹಿಸುಕಿ ಕೊಂದು ಪರಾರಿಯಾಗಿದ್ದ.

ಮೃತಳ ಮನೆಗೆ ಬುಧವಾರ ರಾತ್ರಿ ಆಕೆಯ ಸೋದರ ಬಂದಾಗ ಹತ್ಯೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

13 ವರ್ಷಗಳ ಹಿಂದೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗಾ ಹೋಬಳಿ ಕೆಂಚೇನಹಳ್ಳಿ ಗ್ರಾಮದ ಅಶೋಕ್ ಹಾಗೂ ವನಜಾಕ್ಷಿ ವಿವಾಹವಾಗಿದ್ದು, ಈ ದಂಪತಿಗೆ ಮೂರು ಮಕ್ಕಳಿದ್ದಾರೆ.

 ಕಾವೇರಿಪುರದಲ್ಲಿ ಈ ಕುಟುಂಬ ನೆಲೆಸಿತ್ತು. ಮನೆ ಸಮೀಪದ ಗಾರ್ಮೆಂಟ್ಸ್ನಲ್ಲಿ ವನಜಾಕ್ಷಿ ನೌಕರಿಯಲ್ಲಿದ್ದರೆ, ಅಶೋಕ್ ಕ್ಯಾಬ್ ಚಾಲಕನಾಗಿದ್ದ. ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು.

ಸದಾ ಕಾಲ ಯಾರೊಂದಿಗೋ ಪತ್ನಿ ಮೊಬೈಲ್ನಲ್ಲಿ ಮಾತನಾಡುತ್ತಾಳೆ ಎಂಬುದು ಅಶೋಕ್ ಆಕ್ಷೇಪವಾಗಿತ್ತು. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ್ಗೆ ಜಗಳಗಳು ನಡೆದಿದ್ದವು. ಪತ್ನಿಗೆ ಗೊತ್ತಾಗದಂತೆ ಆಕೆಯ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಆತ ಮಾತುಕತೆ ಕೇಳಿಸಿಕೊಂಡಿದ್ದ.

ಅಂತೆಯೇ ಭಾನುವಾರ ರಾತ್ರಿ 9.45ರ ಸುಮಾರಿಗೆ ಅಶೋಕ್ ಮನೆಗೆ ಬಂದಾಗ ವನಜಾಕ್ಷಿ ಮೊಬೈಲ್ ಮಾತುಕತೆಯಲ್ಲಿ ನಿರತಳಾಗಿದ್ದಳು. ಆಗ ಯಾರೊಂದಿಗೆ ಮಾತನಾಡುತ್ತಿರುವುದು ಎಂದು ಪತ್ನಿಯನ್ನು ಆತ ಪ್ರಶ್ನಿಸಿದ್ದಾನೆ. ಈ ಮಾತಿಗೆ ಆಕೆ ಸಿಟ್ಟಿನಿಂದ ಉತ್ತರಿಸಿದ್ದಾಳೆ.

ಆಗ ಕೆರಳಿದ ಅಶೋಕ್, ಪತ್ನಿ ಕಪಾಳಕ್ಕೆ ಬಿಗಿದಿದ್ದಾನೆ. ಆಗ ರೊಚ್ಚಿಗೆದ್ದ ಆಕೆ, ಅಡುಗೆ ಮನೆಯಿಂದ ಇಟ್ಟಿನ ಕೋಲು ತಂದು ಪತಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾಳೆ. ಈ ಹಂತದಲ್ಲಿ ಇಟ್ಟಿನ ಕೋಲು ಕಸಿದುಕೊಂಡ ಅಶೋಕ್, ಪತ್ನಿಗೆ ತಿರುಗಿ ಬಾರಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments