Select Your Language

Notifications

webdunia
webdunia
webdunia
webdunia

ಆನೇಕಲ್ ನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ್ಯ

Wildebeest herd sighting at Anekal
bangalore , ಗುರುವಾರ, 5 ಜನವರಿ 2023 (19:41 IST)
ಆನೇಕಲ್ ತಾಲೂಕಿನ ಸುಣವಾರ ಗ್ರಾಮದ ಬಳಿ ಇಂದು ಮುಂಜಾನೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ, ಮುತ್ಯಾಲಮಡುವು ರಸ್ತೆಯಲ್ಲಿ 15 ಕಾಡಾನೆಗಳು ರಸ್ತೆ ದಾಟುತ್ತಿರುವ ದೃಶ್ಯವನ್ನು ಸ್ಥಳಿಯರು ಮೊಬೈಲ್ ‌ನಲ್ಲಿ ಚಿತ್ರಿಸಿಕೊಂಡಿದ್ದಾರೆ. ತಮಿಳುನಾಡು ಕಡೆಯಿಂದ ರಾತ್ರಿ ವೇಳೆಯಲ್ಲಿ ರಾಜ್ಯದ ಗಡಿಭಾಗದ ಗ್ರಾಮಗಳಿಗೆ ಬರುವ ಕಾಡಾನೆಗಳ ಹಿಂಡು ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ತಿಂದು ನಾಶ ಗೊಳಿಸುತ್ತಿವೆ. ಕಳೆದ 15 ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ಕಾಡಾನೆಗಳನ್ನು ನಿಯಂತ್ರಣ ಮಾಡುವಂತೆ ಸ್ಥಳೀಯ ರೈತರು ಅರಣ್ಯ ಇಲಾಖೆಗೆ ಮನವಿ ಮಾಡುತ್ತಿದ್ದಾರೆ. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಮತ್ತೆ ಅರಣ್ಯದ ಕಡೆ ಕಳುಹಿಸಲು ಕಾರ್ಯಾಚರಣೆ ಶುರು ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಲಾಕಪ್ ಡೆತ್​..?