Publish Date: Mon, 01 Jan 2024 (19:19 IST)
Updated Date: Mon, 01 Jan 2024 (21:20 IST)
ರಾಮನಗರದಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ.. ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದ ಬರಡನಹಳ್ಳಿ ಗ್ರಾಮದಲ್ಲಿ ನಡೆದಿದೆ.. 35 ವರ್ಷದ ದುಂಡಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಬೆಳ್ಳಂಬೆಳಗ್ಗೆ ತೋಟಕ್ಕೆ ಹೋಗುತ್ತಿದ್ದಾಗ ಕಾಡಾನೆ ಮಹಿಳೆ ಮೇಲೆ ಏಕಾಏಕಿ ದಾಳಿ ಮಾಡಿದೆ.
ಆನೆ ದಾಳಿಗೆ ಮಹಿಳೆಯ ಎಡಭಾಗದ ಕೈ ಮುರಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.. ಗಾಯಗೊಂಡ ಮಹಿಳೆಯನ್ನ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.