Publish Date: Thu, 16 Feb 2023 (13:24 IST)
Updated Date: Thu, 16 Feb 2023 (13:31 IST)
ಕಾಡಾನೆಯೊಂದು ದಾಳಿ ಮಾಡಿದ್ದು, ಜಾನುವಾರು ಸಾವಿಗೀಡಾಗಿ, ವ್ಯಕ್ತಿಯೊಬ್ಬನನ್ನ ಗಂಭೀರವಾಗಿ ಗಾಯಗೊಳಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಗೋಪಾಲ್ರನ್ನು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡುವಾಗ ಮನೆ ಮಾಲೀಕ ಗೋಪಾಲ್ ಹೊರಗಡೆ ಹೋಗಿದ್ದಾರೆ. ಈ ವೇಳೆ ಕಾಡಾನೆ ಗೋಪಾಲ್ ಮೇಲೆ ದಾಳಿ ನಡೆಸಿದ್ದು, ಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.