Publish Date: Sat, 01 Dec 2018 (20:22 IST)
Updated Date: Sat, 01 Dec 2018 (20:24 IST)
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹರುವನಹಳ್ಳಿ ಗ್ರಾಮದ ಸಮೀಪ ಘಟನೆ ನಡೆದಿದೆ.
ಭತ್ತದ ಗದ್ದೆಯಲ್ಲಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ತಗುಲಿ 25 ವರ್ಷದ ಕಾಡಾನೆ ಸಾವು ಕಂಡಿದೆ.
ಕರಿರಾಜು ಎಂಬುವರ ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ಆನೆ ಬಲಿಯಾಗಿದೆ. ಸ್ಥಳಕ್ಕೆ ಲಕ್ಕವಳ್ಳಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಲಕ್ಕವಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ. ಘಟನೆಗೆ ಸಂಬಂಧಿಸಿದಂತೆ ಕರಿರಾಜು, ಅಯ್ಯಪ್ಪ, ಮುರುಗಾ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.