Publish Date: Mon, 01 Jul 2019 (13:47 IST)
Updated Date: Mon, 01 Jul 2019 (13:48 IST)
ಬೆಂಗಳೂರು : ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಇಂದು ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದು, ಇನ್ನೂ 7 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿನ್ನೆ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಆನಂದ್ ಸಿಂಗ್ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಆನಂದ್ ಸಿಂಗ್ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಶಾಸಕ ಆನಂದ್ ಸಿಂಗ್ ಅವರೇ ಸ್ಪಷ್ಟನೆ ನೀಡಬೇಕಿದೆ.