Select Your Language

Notifications

webdunia
webdunia
webdunia
webdunia

ಎಸ್‌ಸಿ,ಎಸ್‌ಟಿ ಸಮುದಾಯಗಳಿಗೆ ಶೇ.70 ರಷ್ಟು ಮೀಸಲಾತಿ: ಸಿಎಂ

ಎಸ್‌ಸಿ,ಎಸ್‌ಟಿ ಸಮುದಾಯಗಳಿಗೆ ಶೇ.70 ರಷ್ಟು ಮೀಸಲಾತಿ: ಸಿಎಂ
ಬೆಂಗಳೂರು , ಗುರುವಾರ, 5 ಅಕ್ಟೋಬರ್ 2017 (18:39 IST)
ಶಿಕ್ಷಣ ಮತ್ತು ಸಾರ್ವಜನಿಕ ಕ್ಷೇತ್ರದ ಸೇವೆಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ 70ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ತಮಿಳುನಾಡು ಸರಕಾರ ಜಾರಿಗೆ ತಂದ ಮಾದರಿಯಲ್ಲಿ ರಾಜ್ಯದಲ್ಲೂ ಮೀಸಲಾತಿ ತರಲು ಸರಕಾರ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
 
ಅವರು ವಿಧಾನಸೌಧದಲ್ಲಿ ಆಯೋಜಿಸಲಾದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಆದರೆ, ವರುಣನ ಅಬ್ಬರ ಕಾರ್ಯಕ್ರಮಕ್ಕೆ ಅಡ್ಡಿಯಾಯಿತು. 
 
ಮೀಸಲಾತಿಯು ಶೇ. 50 ಕ್ಕಿಂತ ಹೆಚ್ಚಾಗಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆದರೆ, ತಮಿಳುನಾಡು ಸರಕಾರ ಹಿಂದುಳಿದ ಸಮುದಾಯಗಳಿಗೆ ಶೇ.69 ರಷ್ಟು ಮೀಸಲಾತಿ ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ. 
 
ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳು ಸಾಕಷ್ಟು ಪ್ರಾತಿನಿಧ್ಯ ಹೊಂದಿಲ್ಲವಾದ್ದರಿಂದ, ಸರಕಾರ ಮೀಸಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.
 
ನಾನು ಎಸ್‌ಸಿ ಎಸ್‌ಟಿ ಮತಗಳನ್ನು ಸೆಳೆಯಲು ಮೀಸಲಾತಿ ಹೆಚ್ಚಿಸುವ ಪ್ರಯತ್ನ ಮಾಡುತ್ತಿಲ್ಲ. ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ನೀಡುವುದಕ್ಕಾಗಿ ನಾನು ಇದನ್ನು ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಕಾಮುಕರು