Daily Horoscope
✕

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಇಲ್ಲಿದೆ ನೋಡಿ ವಿವರ

ಕೃಷ್ಣವೇಣಿ ಕೆ
ಮಂಗಳವಾರ, 29 ಸೆಪ್ಟಂಬರ್ 2026 (08:52 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ಚುರುಕುಗೊಂಡಿದ್ದು, ಇಂದು ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.
 
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯುದ್ದಕ್ಕೂ ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
 
ಇನ್ನು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಗುಡ್ಡಸಸಿತದ ಆತಂಕ ವ್ಯಕ್ತವಾಗಿದೆ.
 
ಉತ್ತರ ಹಾಗೂ ದಕ್ಷಿಣ ಒಳನಾಡಿನ ಸ್ಥಿತಿಗತಿ:
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಲಕ್ಷಣಗಳಿವೆ.
 
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
 
ಬೆಂಗಳೂರು ಹವಾಮಾನ:
ರಾಜಧಾನಿ ಬೆಂಗಳೂರಿನಲ್ಲಿ ಇಂದು ದಿನವಿಡೀ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

Related News

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments