Daily Horoscope

Select Your Language

Notifications

webdunia
webdunia
webdunia
webdunia

ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡ್ತೀನಿ, ಬಿಜೆಪಿಯವರು ಯಾಕೆ ಕೇಂದ್ರದಿಂದ ಹಣ ಕೇಳಲ್ಲ: ಸಿಎಂ ಡಿಕೆ ಶಿವಕುಮಾರ್

DK Shivakumar
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದು, ನಾಳೆ ತಾವು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರನ್ನು ಖುದ್ದಾಗಿ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಿಜೆಪಿ ನಾಯಕರಿಗೆ ಅವರು ತಿರುಗೇಟು ನೀಡಿದ್ದಾರೆ.
 
ಇಂದು ಸಂಜೆ ಅಧಿಕಾರಿಗಳೊಂದಿಗೆ ಸಭೆ:
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, "ಆಶಾ ಕಾರ್ಯಕರ್ತೆಯರ ಸಮಸ್ಯೆ ಅತ್ಯಂತ ಗಂಭೀರವಾದದ್ದು. ಇಂದು ಸಂಜೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿ ಚರ್ಚಿಸುತ್ತೇನೆ. ಬಳಿಕ ನಾಳೆ ನಾನೇ ಖುದ್ದಾಗಿ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಲಿದ್ದೇನೆ," ಎಂದು ಸ್ಪಷ್ಟಪಡಿಸಿದರು.
 
ಬಿಜೆಪಿ ನಾಯಕರಿಗೆ ಸಿಎಂ ಪ್ರಶ್ನೆ:
ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, "ಇದು ಅತ್ಯಂತ ಗಂಭೀರವಾದ ವಿಚಾರ, ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವಂತೆ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬಿಜೆಪಿಯವರು ಯಾಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ಎಲ್ಲಾ ಒತ್ತಡವನ್ನೂ ನಮ್ಮ ಮೇಲೆಯೇ ಏಕೆ ಹಾಕುತ್ತಿದ್ದಾರೆ?" ಎಂದು ಪ್ರಶ್ನಿಸಿದರು.
 
ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುತ್ತಿದ್ದು, ಅಧಿಕಾರಿಗಳೊಂದಿಗಿನ ಇಂದಿನ ಸಭೆಯ ನಂತರ ನಾಳೆಯ ಭೇಟಿಯಲ್ಲಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವೇ ತನ್ನ ಪಾಲಿನ ಪ್ರೋತ್ಸಾಹಧನವನ್ನು ಹೆಚ್ಚಿಸಿ ಘೋಷಿತ ಭರವಸೆಗಳನ್ನು ಈಡೇರಿಸಬೇಕು ಎಂಬುದು ಪ್ರತಿಪಕ್ಷಗಳ ಆಗ್ರಹವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀರತ್ ಹೋಟೆಲ್ ಕೇಸ್ಗೆ ಬಿಗ್ ಟ್ವಿಸ್ಟ್: ಹಿಂದೂ ಯುವತಿಯ ಎಳೆದೊಯ್ದಿದ್ದ ಯುವಕನಿಗೆ ಈ ಗತಿ ತಂದಿತ್ತ ಯುಪಿ ಪೊಲೀಸರು Video