Daily Horoscope

ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಿಲ್ಲ: ಡಿ ವಿ ಸದಾನಂದ ಗೌಡ

Sampriya
ಗುರುವಾರ, 21 ಮಾರ್ಚ್ 2024 (11:10 IST)
Photo Courtesy X
ಬೆಂಗಳೂರು: ನನಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು ನೋವಿದೆ.  ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಬಿಜೆಪಿ ಸಂಸದ ಸದಾನಂದ ಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್‌ನಿಂದ ಆಫರ್ ಬಂದಿರೋದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದಿಲ್ಲ ಎಂದರು.

ಈಚೆಗೆ ಬಿಜೆಪಿ ಬೆಂಗಳೂರು ಉತ್ತರದಿಂದ ಟಿಕೆಟ್‌ ಕೈತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತಪಡಿಸಿದ್ದರು. ಅದಲ್ಲದೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಸುದ್ದಿ ಕಳೆದೆರಡು ದಿನಗಳಲ್ಲಿ ಜೋರಾಗಿತ್ತು.

ಇದೀಗ ಈ ಎಲ್ಲ ಗೊಂದಲ್ಲಕ್ಕೆ ಡಿವಿ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದಾರೆ.  ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments