Daily Horoscope
✕

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಸಂಪ್ರಿಯ
ಭಾನುವಾರ, 13 ಸೆಪ್ಟಂಬರ್ 2026 (20:52 IST)
ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ ಶಕ್ತಿಗಳ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಪೋಲೀಸರಿಗೆ ಸೂಚಿಸಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಈ ವಿಚಾರದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಗಣೇಶ ಹಬ್ಬವನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಬೇಕು. ಮೆರವಣಿಗೆ ಹೋಗುವಾಗ ಶಿಸ್ತು ಪಾಲನೆ ಆಗಬೇಕು, ವಿದ್ಯುತ್ ಕಂಬ, ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು" ಎಂದರು.


"ಅವರು ಏನಾದರೂ ಮಾಡಲಿ. ಗಣೇಶ ಬಿಜೆಪಿಯವರ ಆಸ್ತಿಯಲ್ಲ. ಬಾಲಗಂಗಾಧರ ತಿಲಕರು ಆರಂಭಿಸಿದ ಆಚರಣೆ ನಡೆದುಕೊಂಡು ಬರುತ್ತಿದೆ. ನಾವು ಹಬ್ಬಕ್ಕೆ ರಜೆ ನೀಡಿ, ಹಬ್ಬ ಆಚರಣೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ.

ಅಶೋಕ್ ಅವರು ಮೈಸೂರಿನ ಟಿ ನರಸೀಪುರ ಪೊಲೀಸ್ ಠಾಣೆಗೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, "ಅವರು ಎಲ್ಲಿಗಾದರೂ ಹೋಗಲಿ. ಏನಾದರೂ ಮಾಡಲಿ. ಸುಳ್ಳೇ ಬಿಜೆಪಿಯವರ ಮನೆ ದೇವರು. ಪೊಲೀಸ್ ಠಾಣೆಗೆ ಯಾಕೆ ಹೋಗುತ್ತಿದ್ದಾರೆ? ಇಲ್ಲದ ವಿಚಾರ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಗೃಹ ಸಚಿವರಾಗಿದ್ದವರು. ಅವರ ಪರಿಮಿತಿ ಏನು ಎಂದು ಅರಿಯಲಿ" ಎಂದು ತಿರುಗೇಟು ನೀಡಿದರು.

ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರಲ್ಲ:

"ನಾವು ಬಿಜೆಪಿಯವರ ಸಭೆಗಳಿಗೆ ನಿಯಂತ್ರಣ ಹಾಕುವುದಿಲ್ಲ. ಅವರು ಕಾನೂನು ಚೌಕಟ್ಟಿನಲ್ಲಿ ಎಲ್ಲಿ ಬೇಕಾದರೂ ತಮ್ಮ ರಾಜಕೀಯ ಸಭೆ ಮಾಡಬಹುದು. ಬಿಜೆಪಿ ಅಧ್ಯಕ್ಷರು ಅನಗತ್ಯವಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಅವರು ಏನಾದರೂ ಮಾಡಬಹುದು, ಏನಾದರೂ ಹೇಳಬಹುದು. ಅವರು ಯಾವ ಮೈದಾನದಲ್ಲಿ ಕಾರ್ಯಕ್ರಮ ಮಾಡಿದರೂ ಅವರಿಗೆ ಅನುಮತಿ ನೀಡಿ ಎಂದು ನಾನೇ ಹೇಳಿರುವೆ. ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರುವುದಿಲ್ಲ. ಅದು ನಮ್ಮ ಕಾರ್ಯವೈಖರಿಯಲ್ಲ" ಎಂದು ಸ್ಪಷ್ಟಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು, ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ಶುರು: ಟಿಕೆಟ್ ದರ, ಸಮಯ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರಿಗೆ ಬಂದ ನಮೋ: ಮೋದಿ, ಡಿಕೆ ಶಿವಕುಮಾರ್ ಫುಲ್ ನಗು, ತಮಾಷೆ..

ಮೈಸೂರಿಗೆ ಮೋದಿ ಬರುತ್ತಿದ್ದಂತೇ ಮೋದಿ ಎಲ್ಲಿಗೂ ಹೋಗಲ್ಲ ಭಿತ್ತಿ ಪತ್ರ ಪ್ರದರ್ಶಿಸಿದ ಬಿಜೆಪಿ ಬೆಂಬಲಿಗರು

ಮಂಚಕ್ಕೆ ಬರ್ತೀಯಾ… ಪಿಕ್ ಅಪ್ ಲೊಕೇಷನ್ ಕೇಳಲು ಫೋನ್ ಮಾಡಿದ ಕ್ಯಾಬ್ ಚಾಲಕ ಯುವತಿ ಬಳಿ ಕೇಳಿದ್ದು ಅದನ್ನು Video

ಸೋ ಸಿಂಪಲ್ ನಿರ್ಮಲಾ ಸೀತಾರಾಮನ್.. ಮೇಲುಕೋಟೆಯಲ್ಲಿ ಹಾಳೆ ತಟ್ಟೆಯಲ್ಲಿ ನೆಲದ ಮೇಲೆ ಕೂತು ಪ್ರಸಾದ ಸೇವಿಸಿದ ಸಚಿವೆ Video

ಮುಂದಿನ ಸುದ್ದಿ
Show comments