Publish Date: Wed, 31 Jan 2018 (18:27 IST)
Updated Date: Wed, 31 Jan 2018 (18:28 IST)
ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾಳೆ.
ಇದಕ್ಕೆ ಪುಷ್ಠಿ ನೀಡುವಂತಹ ಘಟನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ನಡೆದಿದೆ. ರಮ್ಯಾ ಅವರಿಗೆ ವ್ಯವಸ್ಥೆ ಮಾಡಿದ್ದ ಆಸನದಲ್ಲಿ ಕುಳಿತುಕೊಳ್ಳದೆ ಹಿಂಬದಿಯಲ್ಲಿ ಕುಳಿತುಕೊಂಡಿದ್ದಾರೆ. ವೇದಿಕೆಗೆ ಕರೆದರೂ ಎದ್ದು ಹೋಗಲಿಲ್ಲ. ಮೂರು ಬಾರಿ ಕರೆದ ಬಳಿಕ ವೇದಿಕೆಗೆ ಹೋಗಿದ್ದಾರೆ.
ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬಲಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನಲಾಗಿತ್ತು. ಆದರೆ, ರಮ್ಯಾ ದೆಹಲಿಗೆ ಹೋಗಬೇಕಾಗಿದೆ ಎಂದು ಸಭೆಯಲ್ಲಿ ಅರ್ಧಕ್ಕೆ ಎದ್ದು ಹೋಗಿದ್ದಾರೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.