Select Your Language

Notifications

webdunia
webdunia
webdunia
webdunia

ವಿಪಕ್ಷಗಳು ಆರೋಪ ಸಾಬೀತು ಮಾಡಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ರಾಯರೆಡ್ಡಿ

ವಿಪಕ್ಷಗಳು ಆರೋಪ ಸಾಬೀತು ಮಾಡಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ರಾಯರೆಡ್ಡಿ
ಕೊಪ್ಪಳ , ಸೋಮವಾರ, 20 ನವೆಂಬರ್ 2017 (12:55 IST)
ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿರುವ ಕಂಪ್ಯೂಟರ್ ವಿತರಣೆಯಲ್ಲಿ ಭಾರಿ ಭ್ರಷ್ಟಾಚಾರವಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ವಿಪಕ್ಷಗಳು ಆರೋಪವನ್ನು ಸಾಬೀತುಪಡಿಸಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
 
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ನಲ್ಲಿ ಬಿಜೆಪಿ ಮುಖಂಡರಾದ ರಘುನಾಥ್ ಮಲ್ಕಾಪುರೆ, ಕೆ.ಎಸ್.ಈಶ್ವರಪ್ಪ ಮಾಡಿದ್ದ ಆರೋಪಗಳಿಗೆ ರ್ರತಿಕ್ರಿಯೆ ನೀಡಿದ್ದಾರೆ.
 
ಅವರು ಕಂಪ್ಯೂಟರ್ ಪೂರೈಕೆಯಲ್ಲಿ ಅಕ್ರಮಗಳು ನಡೆದಿವೆ ಎನ್ನುವ ಸಂಶಯವನ್ನು ವಿಪಕ್ಷಗಳು ತೋರಿದ ಹಿನ್ನೆಲೆಯಲ್ಲಿ ತನಿಖೆಗಾಗಿ ಸದನ ಸಮಿತಿ ರಚಿಸಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ತಮ್ಮೊಂದಿಗಿರುವ ಲ್ಯಾಪ್ಟಾಪ್ ತೋರಿಸಿದ ಅವರು, ಈ ಮಾದರಿಯ ಲ್ಯಾಪ್‌ಟಾಪ್‌ನ್ನು ಎಸ್ಸಿ / ಎಸ್ಟಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ಸರಬರಾಜು ಮಾಡಲಾಗಿದೆ. ಇದು ಮಾರುಕಟ್ಟೆಯಲ್ಲಿ 21,000 ರೂಪಾಯಿಗಳಿಗೆ ದೊರೆಯುತ್ತದೆ. ಆದರೆ ನಾವು ಬೃಹತ್ ಪ್ರಮಾಣದಲ್ಲಿ ಖರೀದಿಸಿದ್ದರಿಂದ 14,000 ರೂಪಾಯಿಗಳಿಗೆ ಖರೀದಿಸಿದ್ದೇವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೀಪಿಕಾ ಪಡುಕೋಣೆ ಪರ ಸಚಿವ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್