Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ತಾರ?

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ತಾರ?
ಬೆಂಗಳೂರು , ಶನಿವಾರ, 27 ಆಗಸ್ಟ್ 2022 (08:13 IST)
ಬೆಂಗಳೂರು : ಉತ್ತರ ಪ್ರದೇಶ, ತ್ರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
 
ರಾಜ್ಯಾಧ್ಯಕ್ಷರ ಬದಲಾವಣೆ ನಡೆಯುವುದಾದರೆ ಗಣೇಶೋತ್ಸವ ಬಳಿಕವೋ ಅಥವಾ ಸೆಪ್ಟೆಂಬರ್ ಎರಡನೇ ವಾರದಲ್ಲೋ ಎನ್ನುವ ಗೊಂದಲವಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನೇ ಮುಂದುವರೆಸಬೇಕೋ, ಬೇಡವೋ ಎಂಬುದರ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ಕೊಟ್ಟಿಲ್ಲ.

ಇದರ ನಡುವೆ ಸಚಿವರ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಸೈಲೈಂಟ್ ಆಗಿದೆ. ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಾಗೂ ಸೆಪ್ಟಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಹೈಕಮಾಂಡ್ನಿಂದ ಸರ್ಜರಿ ನಡೆಯಬಹುದಾ ಎಂಬ ಕುತೂಹಲ ಹೆಚ್ಚಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ: ಸಚಿವ‌ ಅಶ್ವತ್ಥನಾರಾಯಣ