ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

Sampriya
ಭಾನುವಾರ, 9 ನವೆಂಬರ್ 2025 (17:35 IST)
Photo Credit X
ಹಾಸನ: ಭೀಮಾ ಹಾಗೂ ಕ್ಯಾಪ್ಟನ್‌ ಫೈಟ್ ನಡುವೆ ನಡೆದ ಕಾಳಗದಲ್ಲಿ ಭೀಮ ಒಂದು ದಂತ ಕಳೆದುಕೊಂಡಿದ್ದಾನೆ. ಎರಡು ಆನೆಗಳ ನಡುವೆ ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಮದದಲ್ಲಿದ್ದ ಎರಡು ದೈತ್ಯಾಕಾರದ ಕಾಡಾನೆಗಳ ಮಧ್ಯೆ ಭೀಕರ ಕಾಳಗವಾಗಿದೆ. 
ಕಾಳಗದ ವೇಳೆ ಸಿಟ್ಟಿನಲ್ಲಿ ಭೀಮಾ ಮರಕ್ಕೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಭೀಮನ ಒಂದು ದಂತ ಮುರಿದು ಬಿದ್ದಿದೆ. 

ಇನ್ನೂ ದಂತ ತುಂಡಾಗಿ ನೋವಿನಲ್ಲಿ ಒಂಟಿಸಲಗ  ಭೀಮಾ ಘೀಳಿಡುತ್ತಿದ್ದು, ಭೀಮನ ಸೊಂಡಿಲಿನ ಬಳಿ ರಕ್ತ ಸುರಿಯುತ್ತಿದೆ. 

ಕಾಫಿ‌ ತೋಟದಲ್ಲಿ ನಿಂತು ಭೀಮಾ ನರಳಾಡಿದ. ಕಾಳಗದಲ್ಲಿ ಕ್ಯಾಪ್ಟನ್‌ಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಕಾಡಾನೆ ಭೀಮಾ ಮಲೆನಾಡು ಭಾಗದ ಜನರ ಪ್ರೀತಿ ಪಾತ್ರವಾಗಿದ್ದಾನೆ. ದಂತ ಮುರಿದುಕೊಂಡಿದ್ದನ್ನು ಕಂಡು ಜನರು ಮರುಕಪಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments