Select Your Language

Notifications

webdunia
webdunia
webdunia
webdunia

ಮರಳಿ ಕೈ ಹಿಡಿತ್ತಾರಾ ಡಾ.ಕೆ ಸುಧಾಕರ್

ಡಾ.ಕೆ ಸುಧಾಕರ್

geetha

bangalore , ಗುರುವಾರ, 22 ಫೆಬ್ರವರಿ 2024 (17:12 IST)
ಬೆಂಗಳೂರು-ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ವೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದೂ ಹೇಳಲಾಗುತ್ತಿದೆ.ಸುಧಾಕರ್ ಅವರು ಲೋಕಸಭೆ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್​​ಗೆ ಲಾಬಿ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅಷ್ಟೇನೂ ಸಕ್ರಿಯವಾಗಿ ಇರದಿದ್ದ ಸುಧಾಕರ್ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೆ ಸಕ್ರಿಯರಾಗಿದ್ದಾರೆ.

ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Share this Story:

Follow Webdunia kannada

ಮುಂದಿನ ಸುದ್ದಿ

ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ