Publish Date: Thu, 25 Oct 2018 (17:39 IST)
Updated Date: Thu, 25 Oct 2018 (17:41 IST)
ದುಷ್ಕರ್ಮಿಯೊಬ್ಬ ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ದಾಳಿ ನಡೆಸಿರುವ ಘಟನೆ ನಡೆದಿದೆ.
ಹೈದರಾಬಾದ್ ನ ವಿಶಾಖಪಟ್ಟಣಂನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಕ್ಷಣ ಜಗನ್ಮೋಹನ ರೆಡ್ಡಿ ಅವರನ್ನು ವಿಶಾಖಪಟ್ಟಣಂನಿಂದ ಹೈದರಾಬಾದ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆತರಲಾಯಿತು.
ಚಾಕುವಿನಿಂದ ದಾಳಿ ಮಾಡಿದ ಕಾರಣದಿಂದ ರೆಡ್ಡಿ ಅವರ ಭುಜಕ್ಕೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾಳಿ ನಡೆಸಿರುವ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದು, ತೀವ್ರವಾದ ವಿಚಾರಣೆಗೆ ಒಳಪಡಿಸಿದ್ದಾರೆ.