Publish Date: Fri, 10 Mar 2023 (09:10 IST)
Updated Date: Fri, 10 Mar 2023 (09:40 IST)
ಮಂಡ್ಯ : ಕರ್ನಾಟಕದ ಸಮಗ್ರ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ. ದೇಶ ವಿರೋಧಿ ಕಾಂಗ್ರೆಸ್ಸಿಗರನ್ನು ಮನೆಯಲ್ಲೇ ಕೂರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು.
ನಗರದ ಕೆ.ಆರ್.ಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮಾನಸಿಕವಾಗಿ ದಿವಾಳಿ ಆಗಿದ್ದಾರೆ. ಒಡೆದು ಆಳುವ ನೀತಿಯ ಕಾಂಗ್ರೆಸ್ ಮುಖಂಡರನ್ನು ಸೋಲಿಸಿ ಮನೆಯಲ್ಲೇ ಕೂರಿಸಿ ಎಂದು ಕರೆ ನೀಡಿದರು.
ದೇಶದ 2ನೇ ದೊಡ್ಡ ಅರ್ಥ ವ್ಯವಸ್ಥೆಯಾಗಿ ಕರ್ನಾಟಕ ಹೊರಹೊಮ್ಮಿದೆ. ರೈತ ವಿದ್ಯಾನಿಧಿ ಮೂಲಕ 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ. ರೈತರಿಗೆ ಸಾಲ, ಮೀಸಲಾತಿ ಹೆಚ್ಚಳ ಸೇರಿ ಸಮಗ್ರ ಅಭಿವೃದ್ಧಿಯ ಕಾರ್ಯವನ್ನು ಗಮನದಲ್ಲಿಟ್ಟು ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು.