Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರು ಭೇಟಿಯಾಗಿ ಮಾತುಕತೆ

Winter session from 2 days
bangalore , ಮಂಗಳವಾರ, 30 ನವೆಂಬರ್ 2021 (19:13 IST)
2 ದಿನಗಳ ಚಳಿಗಾಲದ ಅಧಿವೇಶನ ನಡೆಯುತ್ತಿತ್ತು,ಇಂದು ಸಂಸತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭೇಟಿಯಾಗಿ ಮಾತುಕತೆ ನಡೆಸಿದರು. ದೇವೇಗೌಡರ ಕೈ ಹಿಡಿದು, ಕುರ್ಚಿಯಲ್ಲಿ ಕೂರಿಸಿ, ನಗುತ್ತಾ ಮಾತನಾಡಿಸಿದರು. ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ -ಬಿಜೆಪಿ ಮೈತ್ರಿ ಪ್ರಧಾನಿ ಮೋದಿಯವ್ರ ಬಳಿ ಚರ್ಚೆ ನಡೆಸಿದ್ದಾರೆ. ಪ್ರಹ್ಲಾದ್ ಜೋಷಿಯವ್ರ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.ಇನ್ನು ಮೈತ್ರಿ ವಿಚಾರ ಕುಮಾರಸ್ವಾಮಿ ಯಡಿಯೂರಪ್ಪ ತೀರ್ಮಾನ ಮಾಡ್ತಾರೆ. ಬಿಜೆಪಿಯವ್ರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಮುಂದಿನ ಚುನಾವಣೆಗೆ ಇದೇ ಮೈತ್ರಿ ಮುಂದುವರೆಯುವ ಬಗ್ಗೆ ಚರ್ಚೆ ನಡೆದಿಲ್ಲ ಖರ್ಗೆಯವ್ರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಮನಸ್ಸು ಇದೆ. ಅದ್ರೆ ಅದೇ ಮನಸ್ಸು ಬೇರೆ ನಾಯಕರಿಗೆ ಇಲ್ಲ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಏನಿದೆಯೋ ಗೊತ್ತಿಲ್ಲ.ನಾವು ಮೇಲೆ ಬಿದ್ದು ಮೈತ್ರಿ ಮಾಡಿಕೊಳ್ಳಿ ಎಂದು ಹೇಳಲು ಆಗಲ್ಲ.
ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ  
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ದೇವೇಗೌಡರು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

ಡಿ.1 ರಿಂದ ಆಟೋ ದರ ಹೆಚ್ಚಳ