Publish Date: Sun, 08 Oct 2017 (16:16 IST)
Updated Date: Sun, 08 Oct 2017 (16:20 IST)
ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ನವೆಂಬರ್ 7ರಿಂದ 18ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಸಾಧ್ಯತೆಯಿದೆ.
ಅ. 11ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ಅಧಿವೇಶನದ ದಿನಾಂಕ ನಿಗದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ನ. 6ರಂದು ಕನಕ ಜಯಂತಿ ಇರುವ ಕಾರಣ, ನ. 7ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಇದಕ್ಕೂ ಮೊದಲು ವಿಧಾನಸೌಧದ ವಜ್ರ ಮಹೋತ್ಸವ ಅಂಗವಾಗಿ 2 ದಿನಗಳ ವಿಶೇಷ ಅಧಿವೇಶನ ವಿಧಾನಸೌಧದಲ್ಲಿಯೇ ನಡೆಯಲಿದೆ ಎನ್ನಲಾಗಿದೆ.
ಚಳಿಗಾಲದ ಅಧಿವೇಶನ ನಡೆಯುವ ಸ್ಥಳ ಮತ್ತು ದಿನಾಂಕ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.