Webdunia - Bharat's app for daily news and videos

Install App

ಡಿಸೆಂಬರ್ ಮೊದಲ ವಾರದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ

Webdunia
ಭಾನುವಾರ, 31 ಅಕ್ಟೋಬರ್ 2021 (21:58 IST)
ನವ್ಹಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ ಪತ್ರ.
 
ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.
 
ತತ್ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿರುವ ಅವರು,  ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರುಗಳು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ  ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಗಳೊಂದಿಗೆ  ಚರ್ಚಿಸಲಾಗಿದ್ದು ಅವರು  ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ  ಅಲ್ಲದೇ ಬೆಳಗಾವಿಯಲ್ಲಿ  ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವ್ಹಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ  ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಇದರಿಂದ ಜನೆವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು,  ಅದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ  ಅನುಕೂಲವಾಗುವುದು. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳನ್ನು  ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments