Select Your Language

Notifications

webdunia
webdunia
webdunia
webdunia

ಜ್ಞಾನದ ಜೊತೆ ಬುದ್ಧಿವಂತಿಕೆ ಅಗತ್ಯ- ಸಚಿವ ರಾಜನಾಥ್​​ ಸಿಂಗ್

Wisdom is necessary along with knowledge
dehali , ಶನಿವಾರ, 19 ನವೆಂಬರ್ 2022 (20:02 IST)
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ಯಾರ ಜೊತೆಗು ಗಲಾಟೆ ತೆಗೆಯುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ. ಇಡೀ ಜಗತ್ತೇ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಉಡುಪಿಯಲ್ಲಿ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್​​ ಸಿಂಗ್ ಹೇಳಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲ ಪಟ್ಟದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹಾಗೆ 5 ಜನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು, ವಿಶ್ವದ 3ನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಂತಿದೆ. 2047ರ ವೇಳೆಗೆ ಭಾರತ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಮಾಹೆ ವಿವಿಯ ಸತ್ಯ ನಾಡೆಲ್ಲಾ ಮೈಕೋಸಾಫ್ಟ್​​ನ ನೇತೃತ್ವ ವಹಿಸಿದ್ದಾರೆ ಎಂದು ತಿಳಿಸಿದರು. ಮೈಕ್ರೋಸಾಫ್ಟ್​​ನ್ನು ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿ CEOಗಳು ಭಾರತ ಮೂಲದವರು ಎಂಬುವುದು ನಮ್ಮ ಹೆಗ್ಗಳಿಕೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯು ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ. ಸಂಸ್ಕೃತಿ ಮತ್ತು ಸಂಪ್ರದಾಯ ಇಲ್ಲದ ನಾಗರಿಕ ಜೀವನಕ್ಕೆ ಅರ್ಥ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಕ್‌ಗೆ ವಿಮಾನ ಡಿಕ್ಕಿ- 2 ಸಾವು