Publish Date: Sat, 29 Jun 2019 (19:12 IST)
Updated Date: Sat, 29 Jun 2019 (19:14 IST)
ಸಚಿವರೊಬ್ಬರು ಅಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೃಷ್ಣ ಬೈರೇಗೌಡ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆಗೆ ಸಂವಾದ ನಡೆಸಿದರು.
ಇದರಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯ ಬಗ್ಗೆ ಸಚಿವರು ಮಾಹಿತಿ ಪಡೆದರು.
ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿ ಈ ವಿಡಿಯೋ ಕಾನ್ಫರೆನ್ಸ್ ಆಯೋಜಿಸಲಾಗಿತ್ತು.
ಮುಖ್ಯವಾಗಿ ಮುಂಗಾರು ಮಳೆಯು ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಯಿತು.