ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ರಾಜ್ಯದ ನೂತನ ಉಸ್ತುವಾರಿಯಾಗಿ ಅಧಿಕಾರವಹಿಸಿಕೊಂಡಿರುವ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಯುವಕರಿಗೆ ಹೆಚ್ಚಿನ ಅಧಿಕಾರ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ರೇಸ್‌ನಲ್ಲಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ಎಸ್.ಪಾಟೀಲ್ ಸೇರಿದಂತೆ ಅನೇಕ ಘಟಾನುಘಟಿ ನಾಯಕರಿದ್ದಾರೆ. ಪಕ್ಷದ ಹೈಕಮಾಂಡ್ ಸೂಕ್ತ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.