ಸಂಪುಟ ಪುನಾರಚನೆಯ ಪಟ್ಟಿ ಸಿದ್ದವಾಗಿದ್ದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪಟ್ಟಿಯನ್ನು ರವಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಪುಟ ಪುನಾರಚನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯ ನಡೆದ ಸಭೆ ಅಂತ್ಯವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ,ಸೋನಿಯಾ ಗಾಂಧಿ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸಚಿವರ ಪಟ್ಟಿ ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟದಿಂದ 14 ಸಚಿವರನ್ನು ಕೈಬಿಡುವಂತೆ ಸೋನಿಯಾ ಸಲಹೆ ನೀಡಿದ್ದಾರೆ. ಅದರಂತೆ 14 ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸೋನಿಯಾ ಅಂತಿಮವಾಗಿ ಸಂಪುಟ ಪುನಾರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಅಥವಾ ನಾಡಿದ್ದು ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ