ಬೆಂಗಳೂರು: ಕೆ.ಆರ್ ನಗರದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ದೋಷರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಜತೆಗೆ ಪತ್ನಿ ಭವಾನಿ ರೇವಣ್ಣ ಅವರನ್ನು ಆರೋಪಿ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ದೋಷರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು 8ನೇ ಆರೋಪಿಯಾಗಿದ್ದಾರೆ.
ರೇವಣ್ಣ ಸೂಚನೆ ಮೇರೆಗೆ ಮಹಿಳೆ ಅಪಹರಣ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಹೆಚ್.ಡಿ ರೇವಣ್ಣ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.