ಶಿವಮೊಗ್ಗ: ಭದ್ರಾವತಿ ಮೂಲದ ಮಹಿಳೆಯೊಬ್ಬ ತನ್ನ ಮೇಲೆ ಪೊಲೀಸ್ ಠಾಣಾಧಿಕಾರಿ ನಿರಂತರವಾಗಿ ನಾಲ್ಕು ವರ್ಷಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು ನೀಡಿದ್ದಾರೆ.
ಶಿವಮೊಗ್ಗದ ಸಾಗರ ನಗರ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಮೇಲೆ ಮಹಿಳೆ ದೂರು ನೀಡಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಅಶೋಕ್ ಕುಮಾರ್ ಭದ್ರಾವತಿಯಲ್ಲಿದ್ದಾಗ ನನಗೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಮಾನಭಂಗ ಮಾಡಿದ್ದರು.
ಆಗ ವಿಡಿಯೋ ಮಾಡಿಟ್ಟುಕೊಂಡಿದ್ದ ಅಧಿಕಾರಿ ಅದನ್ನು ತೋರಿಸಿ ತನ್ನ ಮೇಲೆ ನಿರಂತರವಾಗಿ ದೌರ್ಜನ್ಯವೆಸಗಿದ್ದಾರೆ. ಅಲ್ಲದೆ, ತನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಹಾಳುಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಇದೀಗ ಪೊಲೀಸ್ ಅಧಿಕಾರಿ ಮೇಲೆ ವಿಚಾರಣೆಗೆ ಆದೇಶ ನೀಡಲಾಗಿದೆ.