Select Your Language

Notifications

webdunia
webdunia
webdunia
webdunia

ಅಕ್ರಮ ಸಂಬಂಧ ಆರೋಪ: ಕಂಬಕ್ಕೆ ಕಟ್ಟಿ ಹಾಕಿ ಥಳಿತ

ಅಕ್ರಮ ಸಂಬಂಧ ಆರೋಪ: ಕಂಬಕ್ಕೆ ಕಟ್ಟಿ ಹಾಕಿ ಥಳಿತ
ಮೈಸೂರು , ಶನಿವಾರ, 27 ನವೆಂಬರ್ 2021 (10:50 IST)
ಮೈಸೂರು: ಅಕ್ರಮ ಸಂಬಂಧ ಹೊಂದಿದ್ದಾರೆಂಬ ಕಾರಣಕ್ಕೆ ಮಹಿಳೆ ಮತ್ತು ಪುರುಷನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಈ ಸಂಬಂಧ ಮಹಿಳೆ ತನ್ನ ಪತಿ ಮತ್ತು ಮೈದುನನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಇಬ್ಬರೂ ಸೇರಿಕೊಂಡು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾಳೆ.

ಇವರಿಬ್ಬರನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆರೋಪಿ ಪತಿಯನ್ನು ಬಂಧಿಸಲಾಗಿದ್ದು, ಮೈದುನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಅವಘಡ: ವಲಸಿಗರು ಜಲಸಮಾಧಿ!