Select Your Language

Notifications

webdunia
webdunia
webdunia
webdunia

ಗೃಹ ಸಚಿವ ಪರಮೇಶ್ವರ್‌ಗೆ ಮಹಿಳಾ ಆಯೋಗ ಖಡಕ್ ಎಚ್ಚರಿಕೆ

ಗೃಹ ಸಚಿವ ಪರಮೇಶ್ವರ್‌ಗೆ ಮಹಿಳಾ ಆಯೋಗ ಖಡಕ್ ಎಚ್ಚರಿಕೆ
ಬೆಂಗಳೂರು , ಗುರುವಾರ, 5 ಜನವರಿ 2017 (14:23 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು, ನಿಮ್ಮ ಮೇಲೆ ನಾವು ಏಕೆ ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿದೆ.
ಎರಡು ದಿನಗಳ ಹಿಂದೆ ನೀಡಿದ್ದ ನೋಟಿ‌ಸ್‌ಗೆ ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ ಎರಡನೇ ನೋಟಿಸ್ ನೀಡುತ್ತಿದ್ದೇವೆ. ಒಂದು ವೇಳೆ, ಇದಕ್ಕೂ ಪ್ರತಿಕ್ರಿಯೆ ಬಾರದಿದ್ದರೆ ಗೃಹ ಸಚಿವ ಪರಮೇಶ್ವರ್ ವಿರುದ್ದ ಮಹಿಳಾ ಆಯೋಗ ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಆಯೋಗದ ಅಧ್ಯಕ್ಷ ಲಲಿತಾ ಕುಮಾರಮಂಗಳಂ ಖಡಕ್ ಎಚ್ಚರಿಕೆ ನೀಡಿದ್ದಾರೆ. 
 
ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವುದು ಪ್ರತಿಯೊಂದು ಸರಕಾರದ ಆದ್ಯ ಕರ್ತವ್ಯ. ಕೇಂದ್ರ ಸರಕಾರವೇ ಆಗಲಿ, ರಾಜ್ಯ ಸರಕಾರವೇ ಇರಲಿ ಮಹಿಳೆಯರ ರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ. 
 
ಪಾಶ್ವಿಮಾತ್ಯ ಉಡುಪು ಧರಿಸುತ್ತಿರುವುದರಿಂದ ಮಹಿಳೆಯರ ಮೇಲೆ ಹಲ್ಲೆಗಳಾಗುತ್ತಿವೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುವುದು ಸಹಜ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆಯನ್ನು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ನಳಿನ್ ಕಟೀಲ್‌ಗೆ ಕನಿಷ್ಠ ಜ್ಞಾನವೂ ಇಲ್ಲ: ಪೂಜಾರಿ ವಾಗ್ದಾಳಿ