ಗದಗ: ಕಿವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ‍್ಳಲು ಆಸ್ಪತ್ರೆಗೆ ಬಂದಿದ್ದ ಮಹಿಳೆ ವೈದ್ಯರ ಎಡವಟ್ಟಿನಿಂದಾಗಿ ಸಾವನ್ನಪ್ಪಿದ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಕಿವಿ ತೂತು ಸರಿಪಡಿಸಿಕೊಳ್ಳಲು ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ವೈದ್ಯರು ಇಂಜೆಕ್ಷನ್ ಕೊಟ್ಟಿದ್ದಾರೆ. ಈ ಇಂಜಕ್ಷನ್ ನಲ್ಲಿ ಪ್ರಮಾದವಾಗಿದೆ ಎಂಬುದು ಕುಟುಂಬಸ್ಥರ ಆರೋಪ.
ಆರಾಮವಾಗಿದ್ದ ಪತ್ನಿ ಸಾವನ್ನಪ್ಪಿದ್ದರಿಂದ ತೀವ್ರ ದುಃಖಿತನಾದ ಪತಿ ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ತನಗೆ ನ್ಯಾಯ ಸಿಗಬೇಕು ಎಂದು ಗೋಳಾಡಿದ್ದಾನೆ.