Webdunia - Bharat's app for daily news and videos

Install App

13ನೇ ಅಂತಸ್ತಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ

Webdunia
ಮಂಗಳವಾರ, 1 ಸೆಪ್ಟಂಬರ್ 2015 (15:22 IST)
ನಗರದ ಸರ್ಜಾಪುರ ಬಡಾವಣೆಯಲ್ಲಿ 26 ವರ್ಷ ವಯಸ್ಸಿನ ಮಹಿಳೆಯೊಬ್ಬಳು ನಿನ್ನೆ ರಾತ್ರಿ 8 .30ಕ್ಕೆ 13ನೇ ಅಂತಸ್ತಿನಿಂದ ಹಾರಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
 
ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಹಿಳೆ ಅಪಾರ್ಟ್‌ಮೆಂಟ್‌ಗೆ ಯಾಕೆ ಬಂದಿದ್ದಾಳೆ. ಅವಳ ಸಾವು ಆತ್ಮಹತ್ಯೆಯೋ ಅಥವಾ ಹತ್ಯೆಯೋ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮಹಾರಾಷ್ಟ್ರದ ಠಾಣೆ ನಗದ ಮೂಲದವಳಾದ ಮಹಿಳೆ ಇಶಾ ಹಂದಾ ಮೂರುವರೆ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಖಾಸಗಿ ಕಂಪೆನಿಯಲ್ಲಿ ಮಾರುಕಟ್ಟೆ ವ್ಯವಸ್ಥಾಪಕಳಾಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. 
 
ಯುವತಿಯನ್ನು ಅಪಾರ್ಟ್‌ಮೆಂಟ್ ವಾಸಿಗಳು ಗುರುತಿಸುವಲ್ಲಿ ವಿಫಲವಾಗಿದ್ದು ಪ್ರಥಾಮಿಕ ತನಿಖೆಯ ಪ್ರಕಾರ ಇಶಾ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕಾಣಿಸುತ್ತಿದ್ದು ತನಿಖೆ ಮುಂದುವರಿದಿದೆ ಎಂದು ಡಿಸಿಪಿ ರೋಹಿಣಿ ಕಾಟೋಚ್ ಸೆಪಾಟ್ ಹೇಳಿದ್ದಾರೆ.
 
ಇಶಾಳ ತಂದೆ ಮುಂಬೈನ ಠಾಣೆಯಲ್ಲಿ ವಿಮಾ ಏಜೆಂಟ್‌‌ರಾಗಿ ಕಾರ್ಯನಿರ್ವಹಿಸುತ್ತಿದ್ದು ಪೋಸ್ಟ್‌ಮಾರ್ಟಂ‌ ನಂತರ ಶವವನ್ನು ಅವರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಇಶಾ ಹಂದೆ ಡಿಪ್ರೆಶನ್‌ನಿಂದ ಬಳಲುತ್ತಿದ್ದು ಆತ್ಮಹತ್ಯೆಗೆ ಇದುವೇ ಕಾರಣವಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments