ಕಪ್ಪು ಹಣ ತಡೆಗಟ್ಟುವ ಭರದಲ್ಲಿ ಪ್ರಧಾನಿ ಮೋದಿ ಅವರು ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವುದರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುವುದರೊಂದಿಗೆ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರ ಗೌಪ್ಯತೆ ಬೀದಿಗೆ ಬಂದಂತಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣದ ವಿರುದ್ಧ ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿರ್ಧಾರವೇನೋ ಸರಿ. ಈ ಕುರಿತು ಪೂರ್ವ ತಯಾರಿ ಮಾಡಿಕೊಂಡು ಮುಂದಿನ ಹೆಜ್ಜೆ ಇಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ತೆಗೆದುಕೊಳ್ಳುವ ನಿರ್ಧಾರಗಳಿಗೆ ದೇಶಭಕ್ತಿಯ ಲೇಪನ ನೀಡಲಾಗುತ್ತದೆ. ಅದೇ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ದೇಶದ್ರೋಹದ ಯೋಜನೆಗಳು ರಾಷ್ಟ್ರದೋಹದ ಯೋಜನೆಗಳೆಂದು ದೂರಲಾಗುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆಯಲ್ಲಿ 33 ಪ್ರತಿಶತದಷ್ಟು ಸ್ಥಾನ ಮಹಿಳೆಯರಿಗೆ ದೊರಕುವುದರಲ್ಲಿ ಯಾವುದೇ ಸಂದೇಹವಿಲ್ಲ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಪರವಾಗಿರುವುದಾಗಿ ಖುದ್ದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯೇ ಅವರೇ ತಿಳಿಸಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ