Select Your Language

Notifications

webdunia
webdunia
webdunia
webdunia

ನಾಲ್ವರು ಕಾಮುಕರಿಂದ ಮಹಿಳೆ ಮೇಲೆ ಗ್ಯಾಂಗ್‌ರೇಪ್

ನಾಲ್ವರು ಕಾಮುಕರಿಂದ ಮಹಿಳೆ ಮೇಲೆ ಗ್ಯಾಂಗ್‌ರೇಪ್
ಬೆಂಗಳೂರು , ಶನಿವಾರ, 17 ಜೂನ್ 2017 (13:08 IST)
ಮತ್ತೊಂದು ಅವಮಾನವೀಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಮಹಿಳೆಯೊಬ್ಬಳ ಮೇಲೆ ನಾಲ್ವರು ದುಷ್ಕರ್ಮಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.
 
ಗ್ಯಾಂಗ್‌ರೇಪ್ ಬಳಿಕ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ದಾರಿಹೋಕರು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ಆರಂಭಿಸಿದ್ದಾರೆ. 
 
34 ವರ್ಷ ವಯಸ್ಸಿನ ಸಂತ್ರಸ್ಥ ಮಹಿಳೆ ಬಡಕುಟುಂಬದಿಂದ ಬಂದವಳಾಗಿದ್ದಾಳೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಭಾರತೀ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರು ಕಾಮುಕರ ವಿರುದ್ಧ ಗ್ಯಾಂಗ್‌ರೇಪ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಪತಿ ಹುದ್ದೆಗೆ ಮೋಹನ್ ಭಾಗವತ್ ಸೂಕ್ತ ಎಂದ ಶಿವಸೇನೆ: ರಾಂಗ್ ನಂಬರ್ ಎಂದ ಆರ್ ಎಸ್ ಎಸ್