Publish Date: Wed, 05 Jan 2022 (09:30 IST)
Updated Date: Wed, 05 Jan 2022 (09:33 IST)
ದಾವಣಗೆರೆ: ಮಹಿಳೆಗೆ ಮದ್ಯಪಾನ ಮಾಡಿಸಿ ಇಬ್ಬರು ಯುವಕರು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಹೇಯ ಕೃತ್ಯ ದಾವಣಗೆರೆಯಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿ 25 ವರ್ಷದ ಸಂತ್ರಸ್ತ ಯುವತಿ ತೊಗರಿ ಬೆಳೆ ಬೆಳೆದಿದ್ದಳು. ಹೊಲಕ್ಕೆ ಬಂದಾಗ ಇಬ್ಬರು ಆರೋಪಿಗಳು ಆಕೆಯನ್ನು ಬೆದರಿಸಿ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯಪಾನ ಮಾಡಿಸಿದ್ದಾರೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಕೂಗಾಟ ಕೇಳಿ ಸ್ಥಳೀಯರು ಬಂದಿದ್ದಾರೆ. ಆದರೆ ಅಷ್ಟರಲ್ಲಿ ಕಾಮತೃಷೆ ತೀರಿಸಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇದೀಗ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.