Publish Date: Thu, 12 Oct 2017 (19:49 IST)
Updated Date: Thu, 12 Oct 2017 (19:52 IST)
ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿಗಳಾದ ಆರೋಪಿಗಳು, ಯುವತಿಯ ಬಾಯಿಗೆ ಬಟ್ಟೆ ತುರುಕಿ, ಬೆಟ್ಟದ ಮೇಲೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆದರೆ, ಸ್ಥಳೀಯರ ಕೈಗೆ ಸಿಕ್ಕ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಮನಬಂದಂತೆ ಧರ್ಮದೇಟು ನೀಡಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.