Webdunia - Bharat's app for daily news and videos

Install App

ಸುಳ್ಳು ಹೇಳಿ ಪಾಸ್ ಪಡೆದ ಮಹಿಳೆ : 6 ಮಂದಿ ವಿರುದ್ಧ ಎಫ್ ಐ ಆರ್

Webdunia
ಭಾನುವಾರ, 19 ಏಪ್ರಿಲ್ 2020 (15:28 IST)
ವೈದ್ಯಕೀಯ ಪಾಸ್ ನ್ನು ಸುಳ್ಳು ಮಾಹಿತಿ ನೀಡಿ ಸಂಚಾರ ಮಾಡಿದವರ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುಳ್ಳು ಮಾಹಿತಿ ನೀಡಿ ವೈದ್ಯಕೀಯ ಪಾಸ್ ಪಡೆದು ಕೊಡಗು ಪ್ರವೇಶಿಸಿ ಹೋಮ್ಸ್ ಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದ ಬೆಂಗಳೂರು ಹಾಗೂ ತುಮಕೂರು ಮೂಲದ ಐವರು ಹಾಗೂ ಹೋಮ್ಸ್ ಸ್ಟೇ ಮಾಲಿಕನ‌ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಜಿಲ್ಲಾ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಡುವ ಚಿನ್ನಪ್ಪ ಮಾಲಿಕತ್ವದ  ರಿವರ್ ವ್ಯಾಲಿ ಬಂಗಲೋ ಹೋಮ್ಸ್ ಸ್ಟೇಗೆ 15 ದಿನಗಳ ಹಿಂದೆ ತುಮಕೂರು ಮೂಲದ ಇಬ್ಬರು ವ್ಯಕ್ತಿಗಳು ಬೆಂಗಳೂರಿನಿಂದ ಬಂದು ವಾಸ್ತವ್ಯ ಹೂಡಿರುವುದು ಕಂಡುಬಂದಿದೆ.ಅವರನ್ನು ಹೋಮ್ಸ್ ಸ್ಟೇನಲ್ಲಿಯೇ ಕ್ವಾರಂಟೈನ್ ಮಾಡಿ ಹೋಮ್ಸ್ ಸ್ಟೇ ಮಾಲಿಕರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದಾದ ಬಳಿಕ ಏ.17 ರಂದು ಬೆಂಗಳೂರು ಮೂಲದ ಒಬ್ಬರು ಮಹಿಳೆ ಬೆಂಗಳೂರು ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ವೈದ್ಯಕೀಯ ಪಾಸ್ ಪಡೆದು ತುಮಕೂರು ಮೂಲದ ಓರ್ವ ವ್ಯಕ್ತಿ ಹಾಗೂ ಮಹಿಳೆಯೊಂದಿಗೆ ರಿವರ್ ವ್ಯಾಲಿ ಬಂಗಲೋ ಹೋಮ್ಸ್ ಸ್ಟೇಗೆ ಬಂದು ವಾಸ್ತವ್ಯ ಹೂಡಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ, ಹೊದ್ದೂರು ಪಂಚಾಯತ್ ಅಧಿಕಾರಿ  ನೇತೃತ್ವದಲ್ಲಿ ದಾಳಿ ನಡೆಸಿ ಅನಧಿಕೃತವಾಗಿ ವಾಸ್ತವ್ಯ ಹೂಡಿದ್ದ ಐವರು ಹಾಗೂ ಹೋಮ್ಸ್ ಸ್ಟೇ ಮಾಲಿಕರನ್ನು ವಶಕ್ಕೆ ಪಡೆದು ಸೀಲ್ ಮಾಡಿ ಜಿಲ್ಲಾ ಕ್ವಾರಂಟೈನ್‌ಗೆ ಸೇರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments