Publish Date: Sat, 25 Feb 2017 (14:01 IST)
Updated Date: Sat, 25 Feb 2017 (14:09 IST)
ನೆಲಮಂಗಲದ ಬಳಿ ಸೋಮವಾರ ಸಂಭವಿಸಿದ ಬಸ್ ಅಗ್ನಿದುರಂತದಲ್ಲಿ ಗಾಯಗೊಂಡಿದ್ದ ಮಮತಾ ಕೊನೆಯುಸಿರೆಳೆದಿದ್ದಾರೆ.
ಹಾಸನ ಜಿಲ್ಲೆ ವೀರಾಪುರ ಗ್ರಾಮದ ಮಮತಾ 70 ಪ್ರತಿಶತ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಅವರ ಪುತ್ರ 5 ವರ್ಷದ ಯಶವಂತ್ ಈಗ ಸುಧಾರಿಸಿಕೊಂಡಿದ್ದಾನೆ.
ಚಿಕ್ಕಮಗಳೂರಿನಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಬ್ಬ ಮಹಿಳೆ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿತ್ತು. ಬಸ್‌ನಲ್ಲಿ 25ಕ್ಕೂ ಹೆಚ್ಚು ಜನರಿದ್ದರು.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದುರಂತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು. ಶವ ಸಂಸ್ಕಾರಕ್ಕೆ 15 ಸಾವಿರ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ.