Publish Date: Thu, 15 Jun 2023 (21:23 IST)
Updated Date: Thu, 15 Jun 2023 (19:28 IST)
ನಾಳೆಯಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಆಧಾರ್ ಕಾಡ್೯ ಕಡ್ಡಾಯ ಹಿನ್ನೆಲೆ ಆಧಾರ್ ತಿದ್ದುಪಡಿ ಕೇಂದ್ರಗಳಿಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಕಲಬುರಗಿ ಜಿಲ್ಲೆಯ ನಾಡ ಕಚೇರಿ ಹಾಗೂ ಆಧಾರ ಸೇವಾ ಕೇಂದ್ರಗಳ ಬಳಿ ಹೊಸ ಆಧಾರ್ ಕಾರ್ಡ್ ಮಾಡಿಸಲು ಹಾಗೂ ತಿದ್ದುಪಡಿ ಮಾಡಿಸಲು ಮಹಿಳೆಯರು ಕ್ಯೂ ನಿಂತಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಆಧಾರ್ ತಿದ್ದುಪಡಿ ಮಾಡಿಸಲು ಮಹಿಳೆಯರು ಪರದಾಡುತ್ತಿದ್ದಾರೆ.