Select Your Language

Notifications

webdunia
webdunia
webdunia
webdunia

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ: ಡಾ. ಯತೀಂದ್ರ

LokhSabha Election 2024

Sampriya

ಮೈಸೂರು , ಸೋಮವಾರ, 22 ಏಪ್ರಿಲ್ 2024 (15:08 IST)
ಮೈಸೂರು: ಈಚೆಗೆ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಇದೀಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ರಾಜಸ್ಥಾನದ ಬನ್ಸ್​ವಾರಾದಲ್ಲಿ ಭಾನುವಾರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಂರಿಗೆ ಮರು ಹಂಚಿಕೆ ಮಾಡಲಿದೆ ಎಂದಿದ್ದರು.  

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ ಸೃಷ್ಟಿಸಿ, ದೊಂಬಿ ಮಾಡುತ್ತಾರೆ. ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಇದರಿಂದ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಕಳೆದುಕೊಳ್ಳುತ್ತಾರೆಂದು ಹೇಳಿದರು.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯತೀಂದ್ರ, ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ ಈ ರೀತಿ ಮಾತನಾಡುವುದು ಸರಿಯಲ್ಲ. ಇನ್ನೂ ಮೋದ ಅವರು ತುಷ್ಷವಾಗಿ ಮಾತನಾಡಿ, ಮತೀಯ ಭಾವನೆ ಕೆರಳಿಸುವ ರೀತಿ ಹೇಳಿಕೆ ನೀಡಿದ್ದಾರೆಂದು  ಮೋದಿ ವಿರುದ್ಧ ಗುಡುಗಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನೇಹಾ ಹಿರೇಮಠ ಪ್ರಕರಣ ಸಿಐಡಿಗೆ ಹಸ್ತಾಂತರ: ಸಚಿವ ಜಿ. ಪರಮೇಶ್ವರ