ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಕೆಎಸ್‌ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಭೇಟಿ ಬಳಿಕ ಪ್ರತಿಕ್ರಿಯಿಸಿದ ಅವರು, ನಮಗೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸಬೇಕೆಂಬ ಯಾವುದೇ ಉದ್ದೇಶ ನನಗಿಲ್ಲ. ಆದರೆ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ, ಹಂತವಾಗಿ ಪಾಲನೆ ಮಾಡುವುದು ನಮ್ಮ ಆಲೋಚನೆ ಎಂದರು.
ಈ ವಿಚಾರಕ್ಕೆ ವೆಂಕಟೇಶ್ ಪ್ರಸಾದ್ ಅವರು ಒಪ್ಪಿಗೆ ಸೂಚಿಸಿದ್ದು, ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ತಿಳಿಸಿದ್ದೇನೆ ಎಂದರು.