Publish Date: Fri, 01 Feb 2019 (20:00 IST)
Updated Date: Fri, 01 Feb 2019 (20:01 IST)
ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳನ್ನು ಕಾರ್ಮಿಕರಂತೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಅಥಣಿ ಸರ್ಕಾರಿ ನೌಕರರ ಭವನದಲ್ಲಿ ಮಕ್ಕಳೇ ಕಾರ್ಮಿಕರಂತೆ ಕೆಲಸ ಮಾಡಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಕಾರ್ಯಾಗಾರ ಹಿನ್ನೆಲೆಯಲ್ಲಿ ನೂರಕ್ಕೂ ಅಧಿಕ ಶಿಕ್ಷಕರಿಗೆ ಕಾರ್ಯಾಗಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು.
ಶಾಲೆಯ ಬಿಸಿ ಊಟವನ್ನು ಉಲ್ಪತ್ ಉರ್ದು ಹೈಸ್ಕೂಲ್ ವಿದ್ಯಾರ್ಥಿಗಳು ಉಣಬಡಿಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳ ಬಳಕೆ ಮಾಡಿರುವುದಕ್ಕೆ ಪಾಲಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.