Publish Date: Wed, 09 Jan 2019 (19:39 IST)
Updated Date: Wed, 09 Jan 2019 (19:42 IST)
ಕಾರ್ಮಿಕ ಸಂಘಟನೆಗಳು ಎರಡನೇ ದಿನವೂ ಕರೆ ನೀಡಿದ ಅಖಿಲ ಭಾರತ ಮುಷ್ಕರಕ್ಕೆ ಯಾದಗಿರಿಯಲ್ಲಿ ಬೆಂಬಲ ವ್ಯಕ್ತವಾಗಿದೆ.
ವಿವಿಧ ಕಾರ್ಮಿಕ ಸಂಘಗಳ ಒಕ್ಕೂಟದ ಕಾರ್ಯಕರ್ತರು ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸುಡುವ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರಿಗೆ ಬಿಸಿಲಿನ ಬಿಸಿ ತಟ್ಟಿದರೂ ಅದು ಯಾವುದನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಮಾಜಿಕ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.