Select Your Language

Notifications

webdunia
webdunia
webdunia
webdunia

ಭಾರತ ಬಂದ್ ಗೆ ಕಾರ್ಮಿಕ ಸಂಘ ಬೆಂಬಲ

ಬಂದ್
ನಾಳೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಚಿಕ್ಕೊಡಿ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

AIUTUC, AICUC, KSRTC ನೌಕರರು ಸೇರಿದಂತೆ ಆಟೋ ಚಾಲಕರು, ಮಾಲಿಕರು, ಗುತ್ತಿಗೆ ಪೌರ ಕಾರ್ಮಿಕರ ಸಂಘದ ಬೆಂಬಲ ನಿಡುತ್ತಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಬಂದ ಕರೆ ನಿಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಹೊರಗುತ್ತಿಗೆ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ತಿಳಿಸಿದ್ದಾರೆ.

ಇನ್ನೂ ಬಂದ್ ಹಿನ್ನೆಲೆಯಲ್ಲಿ ನಾಳೆ ಖಾಸಗಿ ವಾಹನ ಸಂಚಾರ ಸೇರಿದಂತೆ ಕೆಎಸ್ಆರ್ ಟಿ ಸಿ ವಾಹನ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಅಂಗನವಾಡಿ, ಮತ್ತು ಆಶಾ ಕಾರ್ಯಕರ್ತೆಯರ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ.  



Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ