ಉನ್ನತ ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜಂಟಿಯಾಗಿ ಮಂಗಳೂರಿನ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತ ಕಾರ್ಯಾಗಾರವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು.
ಮಂಗಳೂರು ವಿವಿ ಕುಲಪತಿ ಪ್ರೊ ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ಶಿಕ್ಷಣ ತಜ್ಞರೂ ಆದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಸ್ ವಿನಯ ಹೆಗ್ಡೆ,
ಶಾಸಕರಾದ ಉಮನಾಥ ಕೋಟ್ಯಾನ್, ಲಾಲಾಜಿ ಮೆಂಡನ್, ಮಾಜಿ ಶಾಸಕ ಗಣೇಶ ಕಾರ್ಣಿಕ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ ಬಿ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಇದ್ದರು.
ಇದೇ ಸಂದರ್ಭದಲ್ಲಿ ಮೂಡಿಬಿದರೆಯ ಬನ್ನಡ್ಕದಲ್ಲಿ ಸ್ಥಾಪಿಸಿರುವ ಮಂಗಳೂರು ವಿಶ್ವವಿದ್ಯಾಲಯದ ಘಟಕ ಪ್ರಥಮ ದರ್ಜೆ ಕಾಲೇಜಿಗೆ ಸಚಿವರು ಚಾಲನೆ ನೀಡಿದರು. ಇದು ಮಂಗಳೂರು ವಿವಿ ಯ ಆರನೇ ಘಟಕ ಕಾಲೇಜು.