Select Your Language

Notifications

webdunia
webdunia
webdunia
webdunia

ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ

World famous Mysore Dussehra Mahotsav from September 26
ಮೈಸೂರು , ಶುಕ್ರವಾರ, 23 ಸೆಪ್ಟಂಬರ್ 2022 (16:37 IST)
ಸೋಮವಾರದಿಂದ ವಿಶ್ವವಿಖ್ಯಾತ ಮೈಸೂರು  ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾ ಉದ್ಘಾಟನೆ ಮಾಡುತ್ತಿರುವುದು ವಿಶೇಷ.ಸೆಪ್ಟೆಂಬರ್ 26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ಅವರನ್ನು ಸ್ವಾಗತಿಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮದ ವಿವರ ಬಿಡುಗಡೆ ಮಾಡಿದೆ.ಸೆಪ್ಟೆಂಬರ್ 6 ರಂದು ಸೋಮವಾರ ಬೆಳಗ್ಗೆ 6:15ಕ್ಕೆ ರಾಷ್ಟ್ರಪತಿ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ನೇರವಾಗಿ ಬೆಳಗ್ಗೆ 9 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ  ತಲುಪಿ, ಬೆಳಗ್ಗೆ 10ಕ್ಕೆ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರ ಪುರಸಭೆ ಸದ್ಯಸನ ರಂಪಾಟ