Select Your Language

Notifications

webdunia
webdunia
webdunia
webdunia

ಆರೋಗ್ಯ ಮೇಳದಲ್ಲಿ ವಿಶ್ವದಾಖಲೆ: ಸಚಿವ ಸುಧಾಕರ್ ವಿಶ್ವಾಸ

ಆರೋಗ್ಯ ಮೇಳದಲ್ಲಿ ವಿಶ್ವದಾಖಲೆ: ಸಚಿವ ಸುಧಾಕರ್ ವಿಶ್ವಾಸ
bengaluru , ಶುಕ್ರವಾರ, 13 ಮೇ 2022 (15:06 IST)
ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಗೂ ಡಾ. ಕೆ. ಸುಧಾಕರ್ ಫೌಂಡೇಷನ್ ಸೇರಿಕೊಂಡು ಈ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಿದೆ.  ಮೇ 14 ಮತ್ತು 15 ರಂದು ಈ ಮೇಳ ನಡೆಯಲಿದ್ದು, ಸುಮಾರು ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಬೃಹತ್ ಆರೋಗ್ಯ ಮೇಳಕ್ಕೆ ಈಗಾಗಲೇ  1.25 ಲಕ್ಷ ಜನರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳದಲ್ಲೇ ನೋಂದಣಿಗೆ ಅವಕಾಶವಿದ್ದು ಅದಕ್ಕಾಗಿ ಸುಮಾರು 50 ಕೌಂಟರ್ ಗಳನ್ನು ಕೂಡ ತೆರೆಯಲಾಗಿದೆ.  ಈ ಹಿಂದೆ 73,000 ಜನರುಒಂದೇ ಜಾಗದಲ್ಲಿ ನಡೆದ ಆರೋಗ್ಯ ಮೇಳದಲ್ಲಿ  ಭಾಗವಹಿಸಿದ ದಾಖಲೆ ಇದೆ. ಆದರೆ ಚಿಕ್ಕಬಳ್ಳಾಪುರದ ಈ ಆರೋಗ್ಯ ಮೇಳದ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
2 ದಿನಗಳ ಕಾಲ ನಡೆಯುವ ಈ ಆರೋಗ್ಯ ಮೇಳದಲ್ಲಿ ಒಂದೇ ಸೂರಿನಡಿ ತಪಾಣೆ, ಚಿಕಿತ್ಸೆ ಸೇರಿ ಎಲ್ಲವೂ ಉಚಿತವಾಗಿ ಸಿಗಲಿದೆ. ಅಷ್ಟೇ ಅಲ್ಲದೆ ಶಸ್ತ್ರ ಚಿಕಿತ್ಸೆಯ ಅನಿವಾರ್ಯತೆ ಇದ್ದರೆ ಅಂತಹವರನ್ನು ಸೂಕ್ತ ಆಸ್ಪತ್ರೆಗೆ ಅಥವಾ ವೈದ್ಯಕೀಯ ಸಂಸ್ಥೆಗೆ ರೆಫರ್ ಮಾಡಿ, ಅವರಿಗೆ ಚಿಕಿತ್ಸೆ ಕೊಡಿಸಿ ಅವರನ್ನು ಮತ್ತೆ ಮನೆಗೆ ತರುವ ವ್ಯವಸ್ಥೆ ಮಾಡಲಾಗುವುದು. ಇದು ನೋಡುವವರ ಕಣ್ಣಿಗೆ ನಡೆಯುವ ಆರೋಗ್ಯ ಮೇಳವಲ್ಲ. ಬದಲಾಗಿ ಇದರ ಲಾಭ ಸಂಪೂರ್ಣವಾಗಿ ಜನರಿಗೆ ಸಿಗಬೇಕು ಅನ್ನುವ ಉದ್ದೇಶದಿಂದ ನಡೆಯುವ ಕಾರ್ಯಕ್ರಮ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ಹೆಣ್ಣಿಂದ ಡಿಕೆಶಿಗೆ ಶೇಪ್‌ ಔಟ್‌ ಆಗಿದ್ದಕ್ಕೆ ಖುಷಿ ಆಗಿದೆ: ಅಶ್ವಥ್‌ ನಾರಾಯಣ್‌